ಪಟ್ಟೆ ಬಡಗನ್ನೂರು: ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ವಹಿಸಿ ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ, ರಕ್ಷಣೆ ಮತ್ತು ಬದ್ಧತೆಯನ್ನು ಆಚರಿಸುವ ಒಂದು ಹಬ್ಬವಾಗಿದೆ ಎಂದು ಹೇಳಿದರು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ರಾಖಿಯನ್ನು ಕಟ್ಟಿ, ಸಿಹಿ ತಿಂಡಿಯನ್ನು ಹಂಚಿ ರಕ್ಷಾಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಸುಮನ ಬಿ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ರಾಜಗೋಪಾಲ ಯನ್ ವಂದಿಸಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕರು ರಾಖಿಯನ್ನು ಕಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.