ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ಆ.9ರಂದು ಮೇನಾಲ ಶಾಲೆಯಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ  ಬಾಲಕೃಷ್ಣ ರೈ ಮೇನಾಲ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳು, ಸದಸ್ಯರು  ಒಟ್ಟು ಸುಮಾರು 30 ಮಂದಿ ಸದಸ್ಯರು ಭಾಗವಹಿಸಿದ್ದರು. 

ಮೇನಾಲ ಒಕ್ಕೂಟದ ಸೇವಾಪ್ರತಿನಿಧಿ ಸುಂದರ್ ಜಿ ಮಾರ್ಗದರ್ಶನ ನೀಡಿದರು. ಶಾಲಾ ಸಹ ಶಿಕ್ಷಕಿ ವಾಣಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜಲಜ ವಂದಿಸಿದರು.

LEAVE A REPLY

Please enter your comment!
Please enter your name here