ಪುತ್ತೂರು: ಮಾಂಸಹಾರ ಮತ್ತು ಸಸ್ಯಹಾರ ಖಾದ್ಯಗಳ ‘ಹೋಟೆಲ್ ರೋಯಲ್ ಮ್ಯಾಕ್ಸ್’ ಇಲ್ಲಿನ ಮುಖ್ಯ ರಸ್ತೆಯ ಜಿ.ಎಲ್ ಮಾಲ್ ಎದುರುಗಡೆ ಇರುವ ಸಿಟಿ ಸೆಂಟರ್ ಬಿಲ್ಡಿಂಗ್‌ನಲ್ಲಿ ಆ.11ರಂದು ಶುಭಾರಂಭಗೊಳ್ಳಲಿದೆ.
ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಎಣ್ಮೂರು ದುವಾ ನಿರ್ವಹಿಸಲಿದ್ದು ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ಹೋಟೆಲ್‌ನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಪುತ್ತೂರು ಚರ್ಚ್‌ನ ಪ್ರಧಾನ ಧರ್ಮಗುರು ರೆ.ಫಾದರ್ ಲಾರೆನ್ಸ್ ಮಸ್ಕರೇನ್ಹಸ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೋಟೆಲ್ ರೋಯಲ್ ಮ್ಯಾಕ್ಸ್‌ನ ಮಾಲಕರು ತಿಳಿಸಿದ್ದಾರೆ.