ಪುತ್ತೂರು: ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣೂರು ಮಾಂತೂರು ಎಂಬಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರದ ಸಹಕಾರದಿಂದ ನೂತನವಾಗಿ, 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯರವರು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಆರೋಗ್ಯವಂತ ನಾಗರೀಕರ ಸಮಾಜ ದೇಶದ ಬೆಳವಣಿಗೆಗೆ ಬಹಳ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೂಲಕ ನಿರ್ಮಾಣಗೊಳ್ಳುವ ಆಯುಷ್ಮಾನ್ ಆರೋಗ್ಯ ಕೇಂದ್ರ ಜನಸಾಮಾನ್ಯರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿ ಎಂದು ಹೇಳಿ ಅನುದಾನ ಒದಗಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟರವರಿಗೆ ಧನ್ಯವಾದ ಸಮರ್ಪಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ ಎಂ, ಉಪಾಧ್ಯಕ್ಷೆ ಜಯಶ್ರೀ ಹಾಗೂ ಸದಸ್ಯರುಗಳು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ತಾರಾನಾಥ ಕಾಯರ್ಗ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಅಮಿತ್, ಇಂದಿರಾ ಬಿ.ಕೆ, ಗಂಗಾಧರ ಪೆರಿಯಡ್ಕ, ಗುತ್ತಿಗೆದಾರ ಪುಂಡಲಿಕ ಪವಾರ್ ಮತ್ತು ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಧುಶ್ರಿ ಸ್ವಾಗತಿಸಿ, ವಂದಿಸಿದರು.