ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ನಲ್ಲಿ ‘ಭಾರತೀಯ ಸೇನೆ’ ಎಂಬ ಫೇಸ್ ಬುಕ್ ಪೇಜ್ ಹೊಂದಿರುವ ವ್ಯಕ್ತಿಯೊಬ್ಬರು ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಆ.10ರಂದು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ “ಭಾರತೀಯ ಸೇನೆ” ಎಂಬ ಫೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ, ಮತ್ತು ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದ್ದು, ಫೇಸ್ ಬುಕ್ ಪೇಜ್ನ ಅಡ್ಮಿನ್ ಹೊಂದಿರುವ ವ್ಯಕ್ತಿ ಮತ್ತು ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.