ಕಬಕ ಬ್ಲಾಕ್‌ನ ಕೊಡಿಪ್ಪಾಡಿಯಲ್ಲಿ ಸತತ ಮೂರನೇ ಬಾರಿ ಹಲವು ಯುವಕರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆ!

0


ಪುತ್ತೂರು: ಎಸ್‌ಡಿಪಿಐ ಕೊಡಿಪ್ಪಾಡಿ ಬ್ರಾಂಚ್ ಸಮಿತಿ ವತಿಯಿಂದ ನಿರಂತರವಾಗಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು, ಸತತ ಮೂರನೇ ಬಾರಿ ಕೂಡ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೊಡಿಪ್ಪಾಡಿಯಲ್ಲಿ ನಡೆಯಿತು.


ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮೂನಿಶ್ ಅಲಿ ರವರು ಸವಿಸ್ತಾರವಾಗಿ ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ರವರು ಚುನಾವಣಾ ಪೂರ್ವ ತಯಾರಿ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಮಜೀದ್ ಕೊಡಿಪ್ಪಾಡಿ ಒಳಗೊಂಡಂತೆ ಹಲವಾರು ಯುವಕರು ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಸದಸ್ಯರಾದ ಸಿರಾಜ್ ಕೂರ್ನಡ್ಕ, ಕಬಕ ಬ್ಲಾಕ್ ಅಧ್ಯಕ್ಷ ಸಿದ್ದೀಕ್ ಉರಿಮಜಲು, ಕಾರ್ಯದರ್ಶಿ ಎಂ.ಎಚ್ ಸದ್ದಾಂ ಮುರ, ಕೊಡಿಪ್ಪಾಡಿ ಬ್ರಾಂಚ್ ಅಧ್ಯಕ್ಷ ಫಾರೂಕ್ ಅರ್ಕ ಹಾಗೂ ಕೊಡಿಪ್ಪಾಡಿ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಬಕ ಬ್ಲಾಕ್ ಉಪಾಧ್ಯಕ್ಷ ಅದ್ದು ಕೊಡಿಪ್ಪಾಡಿ ಸ್ವಾಗತಿಸಿ, ಹಫೀಝ್ ಆನಾಜೆ ವಂದಿಸಿದರು. ಇಬ್ರಾಹಿಂ ಆನಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here