ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

0


ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಇದರ ಪ್ರಾಂತ ಕಾರ್ಯವಾಹರು ಆದ ಡಾ. ಜಯಪ್ರಕಾಶ್ ಎಂ. ಇವರು ಹೇಳಿದರು.


ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ಆ.9ರಂದು ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು.


ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ ತನ್ನ ರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳಬಹುದು. ದೇಶಕಾಯುವ ಯೋಧರು, ಅನ್ನ ನೀಡುವ ರೈತರು, ಅಕ್ಷರ ಕಲಿಸುವ ಗುರುಗಳು,ಆರಕ್ಷಕರು ಇವರೆಲ್ಲಾ ನಮ್ಮರಕ್ಷಕರೇ ಹೌದು. ಹೀಗೇ ಹಲವಾರು ಪ್ರಾಮಾಣಿಕ ಶಕ್ತಿಗಳು ನಮ್ಮ ರಕ್ಷಕರೇ ಆಗಿರುವರು.ಹೀಗೆ ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದ ಮತ್ತು ಏಕತೆಯನ್ನು ಉತ್ತೇಜಿಸಲು ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.


ಯುವ ಜನತೆಗೆ ಸಂಬಂಧಗಳ ಮೌಲ್ಯ ಸಾರುವ ರಕ್ಷಾಬಂಧನದಂತಹ ಹಬ್ಬಗಳ ಮಹತ್ವ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಅಣ್ಣ-ತಂಗಿಯರ ಬಾಂಧವ್ಯದ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯಿದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಎಂದು ಹೇಳಿದರು.


ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಕಾರ್ಯದರ್ಶಿಗಳಾದ ಡಾ. ಕೆ . ಎಮ್. ಕೃಷ್ಣ ಭಟ್, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ್ ಬಿ., ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಬಳಿಕ ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷಾಧಾರಣೆಯನ್ನು ಮಾಡಿದರು. ವೇದಿಕೆಯಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್. ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಪ್ರಜ್ವಲ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here