ಪುತ್ತೂರು: ಮೂರು ವರ್ಷಗಳ ಹಿಂದೆ ಕೊಕ್ಕಡ ಸಮೀಪ ಪತ್ನಿಯ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿದ್ದ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಹೈಕೋರ್ಟ್ ಆದೇಶಿಸಿದೆ.
2022ರ ಆ.3ರಂದು ಬೆಳ್ತಂಗಡಿಯ ಕೊಕ್ಕಡ ಗ್ರಾಮದ ಅಗರ್ತ ಮನೆಯಲ್ಲಿ ಗಣೇಶ್ ಎಂಬಾತ ಪತ್ನಿ ಮೋಹಿನಿ ಅವರನ್ನು ಕೊಲೆ ಮಾಡಿದ್ದಾಗಿ ಆರೋಪಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಆರೋಪಿ ಗಣೇಶ್ನನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪಿಗೆ ಇದೀಗ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ನ್ಯಾಯವಾದಿ ಸಚಿನ್ ನಡುತೋಟು ವಾದ ಮಂಡಿಸಿದ್ದರು.