ಪುತ್ತೂರು: ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಉದ್ದೇಶಪೂರ್ವಕವಾಗಿ ಧರ್ಮದ ಆಧಾರದ ಮೇಲೆ ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸುಳ್ಳು ಮಾಹಿತಿ ಪ್ರಚಾರ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಬ್ಯಾರಿ ಮುಸ್ಲಿಂ ಸಾಮ್ರಾಜ್ಯ’ ಎಂಬ ಇನ್ಸ್ಟಾಗ್ರಾಮ್ ಪೇಜಿನಲ್ಲಿ ಉದ್ದೇಶಪೂರ್ವಕವಾಗಿ ಎಲೆಕ್ಟ್ರಾನಿಕ್ ಸಂವಹನದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ವೈಮನಸ್ಸನ್ನು ಪ್ರಚಾರ ಮಾಡಲು ಪ್ರಯತ್ನಿಸುತ್ತಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಧರ್ಮ-ಧರ್ಮಗಳ ನಡುವೆ ವೈಮನಸ್ಸನ್ನು ಉಂಟು ಮಾಡುವ ರೀತಿಯಲ್ಲಿ, ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಸುಳ್ಳು ಮಾಹಿತಿನ್ನು ಪ್ರಚಾರ ಮಾಡುವ ಕೃತ್ಯವೆಸಗಿರುವುದು ಕಂಡು ಬಂದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.