ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಸಂತ್ರಸ್ತೆ ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರುನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಆಗಮಿಸಿದ ಸಂತ್ರಸ್ತೆ,’ಇತ್ತೀಚೆಗೆ ನನ್ನ ಮನೆಯ ಸುತ್ತಮುತ್ತ ಕೆಲ ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿದ್ದಾರೆ. ಅದರಲ್ಲೂ ರಾತ್ರಿಯ ವೇಳೆ ಅಪರಿಚಿತರು ಸಂಚರಿಸುತ್ತಿರುವುದನ್ನು ನಾನು ಮತ್ತು ನನ್ನ ತಾಯಿ ಗಮನಿಸಿದ್ದೇವೆ.ನನಗೆ ಆಗಿರುವ ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಗುವುದು ನನ್ನ ಮಗುವಿನಿಂದ ಮಾತ್ರ.ಆದ್ದರಿಂದ ನನ್ನ ಮಗುವಿನ ಜೀವಕ್ಕೆ ಯಾರಿಂದಲಾದರೂ ಆಪಾಯವಾಗುವ ಬಗ್ಗೆ ಭಯವಿರುವುದರಿಂದ ನನಗೆ ಮತ್ತು ನನ್ನ ಮಗುವಿಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ, ಸಂತ್ರಸ್ತೆಯ ತಾಯಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.