
ರಾಮಕುಂಜ: ಕಡಬ ತಾಲೂಕಿನ ಕೊಣಾಜೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಭವಿಷ್ (8ಬಿ), ಸಮರ್ಥ್ ಬಾಹುಬಲಿ ಯಲ್ಲಟ್ಟಿ(9ಬಿ), ಹರ್ಷ ಭಟ್ (10ಬಿ) ಹಾಗೂ ಬಾಲಕಿಯರ ವಿಭಾಗದಲ್ಲಿ ಜಮೀರ(10ಬಿ) ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ಮಾರ್ಗದರ್ಶನ ನೀಡಿದ್ದರು.