ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆ ಪುತ್ತೂರು ಮತ್ತು ಪುರುಷರಕಟ್ಟೆ ಸರಸ್ವತಿ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಘಟಕದ ಸಹಯೋಗದಲ್ಲಿ ‘ಹದಿಹರೆಯದ ಮಕ್ಕಳ ಆರೋಗ್ಯ’ ಕಾರ್ಯಕ್ರಮ ನಡೆಯಿತು.

ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸರಕಾರಿ ಆಸ್ಪತ್ರೆಯ ಆಪ್ತಸಮಾಲೋಚಕಿ ಸುಶ್ಮಿತಾ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಹದಿಹರೆಯದ ಪ್ರಾಯದಲ್ಲಿ ಹೆಣ್ಣು ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪೌಷ್ಟಿಕ ಆಹಾರ ಪದ್ಧತಿ ಬಗ್ಗೆ , ಹದಿಹರೆಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕೆಂದು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್, ಮುಖ್ಯ ಗುರು ಅಖಿಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹತ್ತನೇ ತರಗತಿಯ ಮೋಕ್ಷಿತ್ ವಿ ಬಿ ವಂದಿಸಿದರು. ಶಿಕ್ಷಕಿ ಸಂಧ್ಯಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.