ಪುತ್ತೂರು: ಬೆಂಗಳೂರಿನಲ್ಲಿ ನಡೆಯುವ ಕರಾವಳಿ ಜಿಲ್ಲೆಗಳ 9/11 ಸಮಸ್ಯೆಗಳ ಮಹತ್ವದ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳು ಮತ್ತು ತಿದ್ದುಪಡಿಯ ಬಗ್ಗೆ ಮನವಿಯನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ಪರವಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ( ಮೂಡ) ಅಧ್ಯಕ್ಷ ಸದಾಶಿವ ಉಳ್ಳಾಲ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಮದ್ ಸೋಂಪಾಡಿ ಉಪಸ್ಥಿತರಿದ್ದರು.