ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಗೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಈ ಬಾರಿ ಗಣೇಶ ಚತುರ್ಥಿಗೆ ಗಣೇಶನಿಗೆ ಪ್ರಿಯವಾದ ಮೋದಕವನ್ನು ಮಾಡಿ, ಹೋಮದಲ್ಲಿ ಅರ್ಪಿಸುವ ಪೂಜಾ ವಿಧಿಯು ಆ.27 ರಂದು ನಡೆಯಲಿದೆ.
ಈ ಕುರಿತು ಆ.12 ರಂದು ಮೋದಕ ಸೇವಾ ರಶೀದಿಯನ್ನು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಿಡುಗಡೆಗೊಳಿಸಲಾಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ಚರ ಭಡ್ ಪಂಜಿಗುಡ್ಡೆ, ಸದಸ್ಯರಾದ ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ರತ್ನಾಕರ ನಾಯ್ಕ್, ಬಾಲಚಂದ್ರ ಸೊರಕೆ, ಪವಿತ್ರ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.