ಆಲಂಕಾರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.8 ರಿಂದ 15ರವರೆಗೆ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ” ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಉತ್ಸವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು,
ಬೆಳಿಗ್ಗೆ ಆಲಂಕಾರು ಗ್ರಾ.ಪಂ ನಲ್ಲಿ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಕೈಗೊಂಡು ನಂತರ ಸ್ವಚ್ಚತೆಯಲ್ಲಿ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲ ಕೊಂಡಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ .ಕೆ ಉಪಾಧ್ಯಕ್ಷ ರವಿ ಪೂಜಾರಿ, ಕುಂಞಲಡ್ಡ,ಕಾರ್ಯದರ್ಶಿ ವಸಂತ ಶೆಟ್ಟಿ, ಗ್ರಾ.ಪಂ ಸದಸ್ಯರಾದ ಸದಾನಂದ ಆಚಾರ್ಯ, ಶ್ವೇತ ಕುಮಾರ್, ಚಂದ್ರಶೇಖರ, ಕೃಷ್ಣಗಾಣಂತಿ,ಶಾರದ, ಸುನಂದ, ರೂಪಶ್ರೀ,
ಸುಮತಿ, ವಾರಿಜ, ಮತ್ತು ಸಿಬ್ಬಂದಿ ವರ್ಗದವರು, ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
