ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್ನ ೨೦೨೫-೨೬ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.13ರಂದು ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಯಶವಂತ್ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಗ್ರಾ.ಪಂ.ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಕೆ.ಬಾಬು ಪೂಜಾರಿ, ಪಿಡಿಒ ಜಗದೀಶ ನಾಯ್ಕ್, ಕಾರ್ಯದರ್ಶಿ ಚಂದ್ರಾವತಿ ಎನ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.