ಆ.19: ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

0

ಪುತ್ತೂರು: ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣದಲ್ಲಿ ಆ.19ರಂದು ಬೆಳಿಗ್ಗೆ 11.00 ಗಂಟೆಯಿಂದ “ಲೋಕಾಯುಕ್ತ ಜನ ಸಂಪರ್ಕ ಸಭೆ” ನಡೆಯಲಿದೆ .

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಆ.19ರಂದು ಭೇಟಿ ನೀಡಲಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here