ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಸಮಗ್ರ ಶಿಕ್ಷಣ ಅಭಿಯಾನ ಕರ್ನಾಟಕ ವತಿಯಿಂದ ಸಾಮಾಜಿಕ ಪರಿಶೋಧನಾ ಹಾಗೂ ಪೋಷಕರ ಸಭೆಯು ಆ.12ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನೋಡೆಲ್ ಅಧಿಕಾರಿ ಸವಣೂರು ಮೆಸ್ಕಾಂ ಜೆ ಇ, ರಾಜೇಶ್ ರವರು ಮಾತನಾಡಿ, ಪೋಷಕರು ಮಕ್ಕಳ ಬಗ್ಗೆ ಜಾಗೃತ ವಹಿಸಬೇಕು ಎಂದು ತಿಳಿಸಿದರು. ತಾಲೂಕು ಸಂಪನ್ಮೂಲ ವ್ಯಕ್ತಿ ಪ್ರವೀಣ್ ರವರು ಸಮಗ್ರ ಶಿಕ್ಷಣ ಮತ್ತು ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಶಾಲೆಗೆ ಸಂಬಂಧಪಟ್ಟ ಬೇಡಿಕೆ ಹಾಗೂ ಶಿಕ್ಷಣ ಇಲಾಖೆ ಕುಂದು ಕೊರತೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಸವಿತಾ ಕುಮಾರಿ ವಿ, ಪ್ರತಿಭಾ ಕುಮಾರಿ ಎಚ್, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿಯರಾದ ವರ್ಷಿಕ ಡಿ.ವಿ ಮತ್ತು ವರ್ಣಿಕ ಡಿ.ವಿ ಪ್ರಾರ್ಥಿಸಿದರು. ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ, ಸಹ ಶಿಕ್ಷಕಿ ಮೋಹಿನಿ ವಂದಿಸಿದರು.