ಪುತ್ತೂರು: ಸ್ನೇಹ ಯುವಕ ಮಂಡಲ ಮತ್ತು ಸ್ನೇಹ ಮಹಿಳಾ ಮಂಡಲ ಪರ್ಪುಂಜ ಇವರ ಜಂಟಿ ಆಶ್ರಯದಲ್ಲಿ 21ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಯು ವಿವಿಧ ಕಾರ್ಯಕ್ರಮಗಳೊಂದಿಗೆ ಆ.15ರಂದು ಪರ್ಪುಂಜ ರಾಮಜಾಲು ಗರಡಿ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ರಾಮಜಾಲು ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕ ಸಹಜ್ ರೈ ಬಳಜ್ಜ, ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ, ಉದ್ಯಮಿ ಮೋಹನದಾಸ ರೈ ಕುಂಬ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಮುಡಾಲ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕುಂಬ್ರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಶಿವಕೃಪಾ ಅಡಿಟೋರಿಯಂ ಮಾಲಕ ಗಣೇಶ್ ಕೋಡಿಬೈಲು, ಸಂಟ್ಯಾರು ವಿನಾಯಕ ಭಜನಾ ಮಂದಿರದ ಅಧ್ಯಕ್ಷ ಶರತ್ ಆಳ್ವ, ಹೊಸದಿಗಂತ ಕಛೇರಿ ಮಂಗಳೂರಿನ ಡಾ.ಲತಾ ರೈ ಸುಬ್ರಹ್ಮಣ್ಯ, ಅರ್ಚಕ ಹರೀಶ್ ಶಾಂತಿ ಸಹಿತ ಹಲವು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳು ಸಭಾ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ನಡೆಯಲಿದೆ. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಪುರುಷರಿಗೆ ಕಂಬ ಏರುವುದು, ಮಡಿಕೆ ಹೊಡೆಯುವುದು, ಹಗ್ಗಜಗ್ಗಾಟ, ಗೋಣಿ ಚೀಲದ ಓಟ, ಕೋಲು ಓಟ, ಮಹಿಳೆಯರಿಗೆ ಮಡಿಕೆ ಹೊಡೆಯುವುದು, ಹಗ್ಗಜಗ್ಗಾಟ, ಲಕ್ಕಿಸರ್ಕಲ್, ಗುಂಡೆಸೆತ, ಪುಟಾಣಿಗಳಿಗೆ ರಾಧಾಕೃಷ್ಣ ಛದ್ಮವೇಷ, ಕಡ್ಲೆ ಹೆಕ್ಕುವುದು, 1ರಿಂದ 4ನೇ ತರಗತಿಗೆ ಛದ್ಮವೇಷ, ಲಿಂಬೆಚಮಚ ಓಟ, ಸೂಜಿದಾರ ಓಟ, 5ರಿಂದ 7ಕ್ಕೆ ಲಿಂಬೆ ಚಮಚ ಓಟ, ಲಕ್ಕಿಸರ್ಕಲ್, 8 ರಿಂದ 10ಕ್ಕೆ 100 ಮೀ.ಓಟ, ಗುಂಡೆಸೆತ ಹಾಗೂ ಇನ್ನಿತರ ಆಟೋಟ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ ಉಪಾಹಾರ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9980273673 ಅಥವಾ 9535574567ಗೆ ಸಂಪರ್ಕಿಸಬಹುದು ಎಂದು ಸ್ನೇಹ ಯುವಕ ಮಂಡಲದ ಗೌರವ ಅಧ್ಯಕ್ಷ ಪ್ರೇಮ್‌ರಾಜ್ ರೈ ಪರ್ಪುಂಜ, ಅಧ್ಯಕ್ಷ ವಿಪಿನ್ ಶೆಟ್ಟಿ, ಕಾರ್ಯದರ್ಶಿ ನಿತಿನ್ ಗೌಡ, ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಬೇಬಿ ರೈ, ಅಧ್ಯಕ್ಷೆ ಪ್ರಮೀಳಾ ಎಸ್, ಕಾರ್ಯದರ್ಶಿ ರೇಖಾ ಎಸ್ ಹಾಗೂ ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.