ವಿದ್ಯಾಭಾರತಿ ಕರಾಟೆ: ವಿವೇಕಾನಂದ ಆ.ಮಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇದರ ಆಶ್ರಯದಲ್ಲಿ ಶ್ರೀ ಭಾರತಿ ಪ್ರೌಢ ಶಾಲೆಯಲ್ಲಿ ಜುಲೈ 26ರಂದು ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ 8ನೇ ತರಗತಿ (ಸುಧೀರ್ ಹಾಗೂ ಲತಾ ಸುಧೀರ್ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಪ್ರಥಮ್.ಎಂ 8ನೇ ತರಗತಿ ( ಮೋಹನ್ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಹಾಗೂ ರಂಜಿತ್ ಪ್ರಭು 8ನೇ ತರಗತಿ ( ಎ.ರವೀಂದ್ರ ಮತ್ತು ಸರಸ್ವತಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ್ 6 ಮತ್ತು 7ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಬಾಲಕರ ವಿಭಾಗದಲ್ಲಿ ತೇಜಸ್ವಿ.ಡಿ.ವಿ, 8ನೇ ತರಗತಿ ಮತ್ತು ಯಶಸ್.ಎಚ್.ಆರ್ ರೈ, 7ನೇ ತರಗತಿ ಅವರುಗಳು ತೃತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸಿರಿ ಹಳೇಮನೆ, 9ನೇ ತರಗತಿ ದ್ವಿತೀಯ ಸ್ಥಾನ ಹಾಗೂ ಮಹತಿ.ಎಂ, 8ನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here