ನೆಲ್ಯಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುದ್ಯ ಬಜತ್ತೂರು ಇದರ ವತಿಯಿಂದ ಆ.27ರಂದು ಮುದ್ಯ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.10ರಂದು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.
ವಸಂತ ಗೌಡ ಪಿಜಕ್ಕಳ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಪ್ರಸಾದ್ ಉಡುಪ, ಉತ್ಸವ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನೀರಕಟ್ಟೆ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ಗೌಡ ದಡ್ಡು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.