ಆ. 15ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಷೇಧ

0

ಕಾಣಿಯೂರು:ರಾಜ್ಯದ ಪ್ರಸಿದ್ದ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ. ರಾಜ್ಯ ಸರಕಾರದ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಡಿಯವಾಗಿ ನಿಷೇಧಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲರೀತಿಯ ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ದೇಗುಲದ ಪರಿಸರದ ಅಂಗಡಿಗಳಲ್ಲಿ ವಾಣಿಜ್ಯ ಸಂಕೀರ್ಣಗಳಲ್ಲೂ ಏಕಬಳಕೆಯ ಪ್ಲಾಸ್ಟಿಕ್‌ಗಳ ಬಳಸುವಂತಿಲ್ಲ. ಬಳಕೆ ಕಂಡುಬಂದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಮತ್ತು ಇಒ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ.


ಶ್ರೀ ದೇಗುಲದ ಅಧೀನದ ಎಲ್ಲ ಅಂಗಡಿ ಮಳಿಗೆಗಳಲ್ಲಿ ಹಾಗೂ ಆವರಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ನೊಟೀಸ್ ನೀಡಲಾಗಿದೆ. ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು. ಜತೆಗೆ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಎಚ್ಚರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಂಚಾಯತ್ ವ್ಯಾಪ್ತಿಯ ಅಂಗಡಿಗಳಿಗೆ ಸೂಚನೆ ನೀಡಲು ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಗೆ ಒಳಪಟ್ಟು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕ್ರಮಕ್ಕಾಗಿ ಪತ್ರ ಬರೆಯಲಾಗಿದೆ

LEAVE A REPLY

Please enter your comment!
Please enter your name here