ಪುತ್ತೂರು: ಸರ್ವೆ ಗ್ರಾಮದ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಇಲ್ಲಿ 354ನೇ ಆರಾಧನಾ ಮಹೋತ್ಸವ ಆ.10ರಿಂದ ಆ.12ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಆ.10ರಂದು ಪೂರ್ವಾರಾಧನೆ, ಉಷಾ ಕಾಲ ಪೂಜೆ, ಅಭಿಷೇಕ, ಶ್ರೀ ಸನ್ನಿಧಿಯಲ್ಲಿ ಶ್ರೀ ನಂದಿಕೇಶ್ವರ ದೇವರಿಗೆ ಏಕದಶರುದ್ರಾಭಿಷೇಕ, ಅಷ್ಟೋತ್ತರ ಮಹಾಪೂಜೆ, ಭಜನೆ, ಸತ್ಯನಾರಾಯಣ ಪೂಜೆ, ರಂಗಪೂಜೆ, ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.
ಆ.11ರಂದು ಆರಾಧನೆ, ಉಷಾ ಕಾಲ ಪೂಜೆ, ಪಂಚಾಮೃತ ಅಭಿಷೇಕ ಸೀಯಾಳ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಬೆಳಿಗ್ಗೆ ಗಂಟೆ 6ರಿಂದ ಸಂಜೆ ಗಂಟೆ 6ರ ತನಕ ಜಯರಾಜ್ ಸುವರ್ಣ ನೇತೃತ್ವದಲ್ಲಿ ಅರ್ಧ ಏಕಾಹ ಭಜನೆ ನಡೆಯಿತು. ಸಂಗೀತ ಕಛೇರಿ, ಭರತನಾಟ್ಯ, ರಂಗಪೂಜೆ, ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ಉತ್ಸವ, ಪ್ರಸಾದ ವಿತರಣೆ ನಡೆಯಿತು.
ಆ.12ರಂದು ಉತ್ತರಾರಾಧನೆ, ಉಷಾ ಕಾಲ ಪೂಜೆ, ಅಭಿಷೇಕ, ಅಷ್ಟೋತ್ತರ ಮಹಾಪೂಜೆ, ಶ್ರೀ ರಾಮ ದರ್ಶನ ಯಕ್ಷಗಾನ ತಾಳಮದ್ದಳೆ, ಭಜನೆ, ರಂಗಪೂಜೆ, ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆಡಳಿತ ವ್ಯವಸ್ಥಾಪಕ ಡಾ.ಕೆ ಸೀತಾರಾಮ ಭಟ್ ಕಲ್ಲಮ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.