ಪುತ್ತೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ, ಶ್ರೀ ಗೌರಿ ಮಹಿಳಾ ಮಂಡಲ ಸರ್ವೆ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆ.15ರಂದು ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಭಜನಾ ಮೆರವಣಿಗೆ, ಸಭಾ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು ಮಧ್ಯಾಹ್ನ ಗಂಟೆ 2.30ರಿಂದ ತಾರನಾಥ ಸವಣೂರು ನಿರ್ದೇಶನದಲ್ಲಿ ಶ್ರವಣರಂಗ ಪ್ರತಿಷ್ಠಾನ ಸವಣೂರು ಸಾದರಪಡಿಸುವ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ ಬಾಲ ಕಲಾವಿದರಿಂದ ಯಕ್ಷಗಾನ ಬಯಲಾಟ ‘ಕೃಷ್ಣಂ ವಂದೇ ಜಗದ್ಗುರುಂ’ ನಡೆಯಲಿದೆ ಎಂದು ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್ ರಾಜ್ ಕರುಂಬಾರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.