ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರ ಹಾಗೂ ಆಂತರಿಕ ಗುಣಮಟ್ಟದ ಭರವಸೆಯ ಕೋಶದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ರಕ್ಷಣ್ ಟಿ ಆರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಭಾಗದ ಉಪನ್ಯಾಸಕಿ ರಶ್ಮಿತ ಎಸ್ ಭಾಗವಹಿಸಿ ಗ್ರಂಥಾಲಯದ ಉಪಯೋಗವು ವ್ಯಕ್ತಿತ್ವ ವಿಕಸನದಲ್ಲಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ನಿರಂತರ ಓದುವಿಕೆಯ ಹವ್ಯಾಸವು ವ್ಯಕ್ತಿತ್ವ ವಿಕಾಸ ಗೊಳ್ಳುವುದರ ಜೊತೆಗೆ ಹಲವುವಿಚಾರ ಧಾರೆಗಳು ನಮ್ಮನ್ನು ಸಂಪನ್ನರಾಗಿಸುತ್ತದೆ.ವಿದ್ಯಾರ್ಥಿಗಳು ಗ್ರಂಥಾಲಯವನ್ನು ಪಠ್ಯ ಮತ್ತು ಪಠ್ಯೇತರ ವಿಷಯಗಳಿಗೆ ಸಂಬಂಧಿಸಿದಂತೆ ಸಮರ್ಪಕವಾಗಿ ಬಳಸಿಕೊಳ್ಳುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಗ್ರಂಥ ಪಾಲಕಿ ಪ್ರಭಾವತಿ ಕೆಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಂಥಪಾಲಕರ ದಿನದ ಮಹತ್ವವನ್ನು ತಿಳಿಸಿ, ಸ್ವಾಗತಿಸಿದರು. ವೇದಿಕೆಯಲ್ಲಿ ಆಂತರಿಕ ಗುಣಮಟ್ಟದ ಭರವಸೆಯ ಕೋಶದ ಸಂಯೋಜಕಿ ರಶ್ಮಿ .ಕೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದ್ವಿತೀಯ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ದೇವಿಕ ಮತ್ತು ಮೋಕ್ಷ ಪ್ರಾರ್ಥಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೃಷ್ಟಿ ವಂದಿಸಿದರು .ದ್ವಿತೀಯ ಫ್ಯಾಷನ್ ಡಿಸೈನ್ ವಿಭಾಗದ ವಿದ್ಯಾರ್ಥಿನಿ ಮೋಕ್ಷ ನಿರೂಪಿಸಿದರು.