ಪುತ್ತೂರು: ಕೇಂದ್ರ ಸರಕಾರದ ನಶಾ ಮುಕ್ತ ಭಾರತ ಅಭಿಯಾನದ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ” ನಶಾ ಮುಕ್ತ ಭಾರತ ಅಭಿಯಾನ -ಜಾಗೃತಿ ಕಾರ್ಯಕ್ರಮ ನಡೆಯಿತು .
ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಆಯಿಷತ್ ಶಿಮ ಶಾಲಾ ಆವರಣದಲ್ಲಿ ಔಷಧೀಯ ಗುಣವುಳ್ಳ ಹಣ್ಣಿನ ಗಿಡವನ್ನು ನೆಡುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು. “ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು .ಶಿಕ್ಷಕ ಗಣೇಶ ನಾಯಕ್ ಪುತ್ತೂರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.