ಕಾವು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಆ.15 ರಂದು ನಡೆಯಲಿದೆ.
ಕ್ರೀಡಾಕೂಟವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮುಡೆತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟನೆ ನಡೆಸಲಿದ್ದಾರೆ. ಉದ್ಘಾಟನೆಯ ಬಳಿಕ ಮಕ್ಕಳಿಗೆ,ಪುರುಷರಿಗೆ ,ಮಾತೆಯರಿಗೆ ವಿವಿಧ ಸ್ಪರ್ಧೆಗಳು ಹಾಗೂ ಪುಟಾಣಿ ಮಕ್ಕಳಿಗೆ ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಮುದ್ದು ರಾಧ- ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.