ಮಹಿಳಾ ಶಿಕ್ಷಣದಲ್ಲಿ ಮರ್ಕಝ್ ಸಂಸ್ಥೆ ಅದ್ಭುತ ಸಾಧನೆ ಮಾಡಿದೆ-ಮೊಯ್ದೀನ್ ಬಾವಾ
ಪುತ್ತೂರು: ಮರ್ಕಝುಲ್ ಹುದಾ ಶಿಕ್ಷಣ ಸಂಸ್ಥೆ ಸಮಾಜದ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದ್ದು ಮಹಿಳಾ ಶಿಕ್ಷಣದಲ್ಲಿ ಅದ್ಭುತ ಸಾಧನೆ ಮಾಡಿದೆ, ವಿದ್ಯಾಭ್ಯಾಸದ ವಿಚಾರದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದರು ಕ್ರಾಂತಿ ಮಾಡಿದ್ದು ಬಹುತೇಕ ಮುಸ್ಲಿಂ ವಿದ್ಯಾರ್ಥಿನಿಯರು ಇಂದು ವಿದ್ಯಾವಂತರಾಗಿ ಮಾರ್ಪಡುತ್ತಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎ ಮೊಯ್ದೀನ್ ಬಾವಾ ಹೇಳಿದ್ದಾರೆ. ಕುಂಬ್ರ ಮರ್ಕಝ್ ಕ್ಯಾಂಪಸ್ನಲ್ಲಿ ಒಮಾನ್ ಸಮಿತಿಯ ಪ್ರಾಯೋಜಕತ್ವದಲ್ಲಿ ಆರಂಭಗೊಂಡ ಓಮಾರ್ಟ್ ಕ್ಯಾಂಪಸ್ ಶಾಪ್ನ್ನು ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಅರಿಯಡ್ಕ ವಹಿಸಿದ್ದರು. ಮಹಮೂದುಲ್ ಫೈಝಿ ಓಲೆಮುಂಡೋವು ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ದುಬೈ ಸಮಿತಿಯ ಅಧ್ಯಕ್ಷ ಬ್ರೈಟ್ ಇಬ್ರಾಹಿಂ ಹಾಜಿ, ಒಮಾನ್ ಸಮಿತಿಯ ಆರ್ಗನೈಸರ್ ಉಬೈದುಲ್ಲಾ ಸಖಾಫಿ ಮಿತ್ತೂರು ಸಮಯೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷ ಡಾ.ಎಂಎಸ್ಎಂ ಅಬ್ದುಲ್ ರಶೀದ್ ಝೈನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಶೀರ್ ಹಾಜಿ ಇಂದ್ರಾಜೆ, ಶರೀಅತ್ ವಿಭಾಗದ ಪ್ರಾಂಶುಪಾಲ ವಳವೂರು ಮುಹಮ್ಮದ್ ಸಅದಿ, ಉಪಪ್ರಾಂಶುಪಾಲ ಜಲೀಲ್ ಸಖಾಫಿ, ಸಮಿತಿಯ ಕೋಶಾಧಿಕಾರಿ ಯೂಸುಫ್ ಗೌಸಿಯಾ ಸಾಜ, ಕಾರ್ಯದರ್ಶಿ ಯೂಸುಫ್ ಮೈದಾನಿಮೂಲೆ, ಸದಸ್ಯರಾದ ಕರೀಂ ಹಾಜಿ ಕಾವೇರಿ, ಆಶಿಕುದ್ದೀನ್ ಅಕ್ತರ್, ದುಬೈ ಸಮಿತಿಯ ಹಾಫಿಝ್ ಮುಹೀನುದ್ದೀನ್ ನೂರಾನಿ, ಶರೀಅತ್ ಮುದರ್ರಿಸ್ ಹನೀಫ್ ಸಖಾಫಿ, ಪದವಿ ವಿಭಾಗದ ಪ್ರಾಂಶುಪಾಲ ಮುಹಮ್ಮದ್ ಮನ್ಸೂರ್ ಕಡಬ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿನಿಯರ ಎಲ್ಲಾ ಅಗತ್ಯತೆಗಳನ್ನು ಒಂದೇ ಸೂರಿನಲ್ಲಿ ಒದಗಿಸಿಕೊಡುವ ನಿಟ್ಟಿನಲ್ಲಿ ಎಲ್ಲಾ ಸಾಮಾಗ್ರಿಗಳು ಇಲ್ಲಿ ಲಭ್ಯವಿದ್ದು, ತರಗತಿ ಬಿಡುವಿನ ಸಮಯ ಮಾತ್ರ ವ್ಯಾಪಾರಕ್ಕೆ ತೆರೆದುಕೊಳ್ಳಲಿದ್ದು ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಮರ್ಕಝ್ ಆಡಳಿತ ಸಮತಿ ತಿಳಿಸಿದೆ.