ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ತಾಲ್ಲೂಕು ದ.ಕ, ಪಿಎಂ ಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದರ ಸಹಯೋಗದಲ್ಲಿ ಉಪ್ಪಿನಂಗಡಿ ವಲಯ ಮಟ್ಟದ 14ರ ವಯೋಮಾನದ, ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.14ರಂದು ಪಿಎಂ ಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಎಸ್ ಡಿಎಮ್ ಸಿ ಅಧ್ಯಕ್ಷ ದಿನಕರ್ ಕೆ ಎಚ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಇವರು ಪಂದ್ಯಾಟದ ಅಂಕಣವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್, ಅಬ್ದುಲ್ ಜಬ್ಬಾರ್, ಬಾಲಕೃಷ್ಣ ಬಾಣಜಾಲು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಷಾಅಂಚನ್, ಕಡಬ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ನೋಡಲ್ ಅಧಿಕಾರಿ ಕುಶಾಲಪ್ಪ ಹಾಗೂ ಗಂಗಾಧರ,ಸಿಆರ್ ಪಿ ಪ್ರಕಾಶ್ ಬಾಕಿಲ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ನಸೀಮ ಹಾಗೂ ಸದಸ್ಯರು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ಧನ, ಶಾಲಾ ಪಿಎಂ ಶ್ರೀ ದೈಹಿಕ ಶಿಕ್ಷಕರಾದ ಜಯಂತ್, ತಾಯಂದಿರ ಸಮಿತಿಯ ಸದಸ್ಯರು, ಸುರಕ್ಷಾ ಸಮಿತಿಯ ಸದಸ್ಯರು, ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿಗಳು, ಪೋಷಕರು, ಊರ ವಿದ್ಯಾರ್ಥಿಗಳು, ಊರ ಕ್ರೀಡಾಅಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನೆರವೇರಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಶಾಲಾ ಮುಖ್ಯ ಗುರುಗಳಾದ ವೀಣಾ ಮಸ್ಕರೇನಸ್ ಎಲ್ಲರನ್ನು ಸ್ವಾಗತಿಸಿದರು. ರತಿಲತಾ ಇವರು ನೆರೆದಿರುವ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕರು ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ವಿಮಲ್ ಕುಮಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.