
ಪುತ್ತೂರು: ಸ್ವಾತಂತ್ರ್ಯೋತ್ಸವ ಆಚರಣೆಯ ಮುನ್ನ ದಿನವಾದ ಆ.14 ರಂದು ಕುಂಬ್ರ ವರ್ತಕರ ಸಂಘದಿಂದ ಶಾಲೆ ಹಾಗೂ ಅಂಗನವಾಡಿಗಳಿಗೆ ಸಿಹಿತಿಂಡಿ ವಿತರಣೆ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವು ಪರ್ಪುಂಜ, ಕೊಲತ್ತಡ್ಕ, ಕುಂಬ್ರ, ಸಾರೆಪುಣಿ ಭಾಗದ 3 ಶಾಲೆಗಳಿಗೆ ಹಾಗೂ 5 ಅಂಗನವಾಡಿ ಕೇಂದ್ರಗಳಿಗೆ ಸಿಹಿತಿಂಡಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ, ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ಮೆಲ್ವಿನ್ ಮೊಂತೆರೋ, ದಿವಾಕರ ಶೆಟ್ಟಿ, ನಾರಾಯಣ ಪೂಜಾರಿ ಕುರಿಕ್ಕಾರ ಮತ್ತಿತರರು ಉಪಸ್ಥಿತರಿದ್ದರು.