ನಾಳೆ(ಆ.15): ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

0

ಪುಣಚ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿ ಪುಣಚ ಇವರ ಆಶ್ರಯದಲ್ಲಿ ನಡೆಯುವ 24ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ.15ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದ ಎದುರುಗದ್ದೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ ದೇವಿ ಸನ್ನಿಧಿಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಿಂದ ಪ್ರಾರ್ಥನೆ ಬಳಿಕ ಬೆಳಗ್ಗಿನಿಂದ ಸಾಯಂಕಾಲದವರೆಗೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.


ಸಾಯಂಕಾಲ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು ಸಭಾಧ್ಯಕ್ಷತೆ ವಹಿಸಲಿದ್ದು ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿ ಗೌರವಾಧ್ಯಕ್ಷ ಎಸ್ ಆರ್ ರಂಗಮೂರ್ತಿ, ಪುಣಚ ಪ್ರಾ.ವ್ಯ.ಸೇವಾ ಸಹಕಾರಿ ಸಂಘದ ಲೆಕ್ಕಿಗ ಪದ್ಮನಾಭ ಗೌಡ ಓ, ದೇವಿನಗರ ಶ್ರೀದೇವಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಲೋಕೇಶ್ ನಾಯ್ಕ ಸಂಕೇಶ, ಒಡಿಯೂರು ಗ್ರಾಮ ವಿಕಾಸ ಯೋಜನಾ ಮೇಲ್ವಿಚಾರಕಿ ಲೀಲಾ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ‌. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣೆ ಸಮಿತಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here