ಪುತ್ತೂರು: ದೇಶದ 79ನೇ ಸ್ವಾತಂತ್ರ್ಯೋತ್ಸವವನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿ ಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಲಯ ಸಮಿತಿಗೆ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮಿಸಲಿದೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳಗ್ಗೆ 8.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಲ್ಲಿದೆ ಪ್ರತಿ ವಲಯದಲ್ಲಿ ಸ್ವತಂತ್ರ ದಿನಾಚರಣೆ, ಧ್ವಜಾರೋಹಣ ಮತ್ತು ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.