ಪುತ್ತೂರು: 70 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನೀರು ಮತ್ತು ನೈರ್ಮಲ್ಯ ಕುರಿತು ಅರಿವು ಮೂಡಿಸುವ ಸಲುವಾಗಿ ಹರ್ ಘರ್ ತಿರಂಗ, ಹರ್ ಘರ್ ಸ್ವಚ್ಛತೆ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಅಭಿಯಾನ ಕಾರ್ಯಕ್ರಮದಡಿ ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಕುಂಬ್ರ ವರ್ತಕರ ಸಂಘದ ನೆರವಿನೊಂದಿಗೆ ಆ.14 ರಂದು ಕುಂಬ್ರ ಪೇಟೆ, ಬಸ್ ನಿಲ್ದಾಣ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ, ಸದಸ್ಯರುಗಳಾದ ಲತೀಫ್ ಕುಂಬ್ರ, ಶೀನಪ್ಪ ನಾಯ್ಕ, ರೇಖಾ ಯತೀಶ್, ಬಿ.ಸಿ ಚಿತ್ರಾ, ವರ್ತಕರ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ, ಸ್ಥಾಪಕ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ, ಉಪಾಧ್ಯಕ್ಷ ಸದಾಶಿವ ಕುಂಬ್ರ,ಮಾಜಿ ಅಧ್ಯಕ್ಷ ಮೆಲ್ವಿನ್ ಮೊಂತೆರೋ ಹಾಗೂ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದ ಎಂಬಿಕೆ ಚಂದ್ರಿಕಾ, ಸುನೀತಾ, ಚಂದ್ರಕಲಾ, ಸವಿತಾ, ಪದ್ಮಾವತಿ, ರಾಜೀವಿ, ಆಶಾಲತಾ ರೈ, ಸ್ವಚ್ಚತಾ ಸೇನಾನಿಗಳಾದ ಕವಿತಾ ಕುಂಬ್ರ, ಕಮಲಾಕ್ಷಿ, ಕವಿತ, ಪಂಚಾಯತ್ ಸಿಬ್ಬಂದಿಗಳಾದ ಗುಲಾಬಿ, ಜಾನಕಿ, ಕೇಶವ, ಮೋಹನ್ ಮತ್ತಿತರರು ಉಪಸ್ಥಿತರಿದ್ದರು.