
ಪುತ್ತುರು: ದ.ಕ.ಜಿ.ಪಂ ಹಿ ಪ್ರಾ ಶಾಲೆ ಸಜಂಕಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ “ಹರ್ ಘರ್ ತಿರಂಗಾ ,ಹರ್ ಘರ್ ಸ್ವಚ್ಛತಾ ,ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಉತ್ಸವ ಅಭಿಯಾನ ನಡೆಯಿತು.

ಈ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅಭಿಯಾನದಲ್ಲಿ ಭಾಗವಹಿಸಿದರು .ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಪ್ರತಿಜ್ಞಾ ವಿಧಿ ಬೋಧಿಸಿದರು .ಶಿಕ್ಷಕ ಗಣೇಶ ನಾಯಕ್ ಪುತ್ತೂರು ,ಅತಿಥಿ ಶಿಕ್ಷಕಿ ಆಯಿಷತ್ ಮಿಸ್ರಿಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.