ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್ ಹಾಗೂ ನಂದಗೋಕುಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಿಳಿನೆಲೆ ಇದರ ವತಿಯಿಂದ ಆ.14ರಂದು ನೆಟ್ಟಣ ರೈಲ್ವೆ ನಿಲ್ದಾಣದ ಬಳಿ ಪೂವಾಹ್ನ ಹರ್ ಘರ್ ತಿರಂಗ, ಹರ್ ಘರ್ ಸ್ವಚ್ಛತೆ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಅಭಿಯಾನ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ರೈಲ್ವೆ ಸ್ವಚ್ಛತಾ ಸಿಬ್ಬಂದಿಗಳೊಂದಿಗೆ ಸ್ವಚ್ಛತೆಯ ವಿಷಯವಾಗಿ ಹಾಗೂ ಯಾವುದೇ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಉರಿಸದಂತೆ ಜಾಗೃತಿ ನೀಡಲಾಯಿತು ಹಾಗೂ ರೈಲ್ವೆ ಸ್ಟೇಷನ್ ನ ಆವರಣದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಸ್ವಚ್ಛತೆಯ ವಿಷಯವಾಗಿ ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡುವಂತೆ ಸ್ವಚ್ಛತಾ ಸಿಬ್ಬಂದಿಗಳಿಗೆ ತಿಳಿಸಲಾಯಿತು.
ಈ ಸ್ವಚ್ಛತಾ ಅಭಿಯಾನದಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು,ರೈಲ್ವೇ ಇಲಾಖಾಧಿಕಾರಿಗಳು, ತಾಲೂಕು ಸಂಪನ್ಮೂಲ ವ್ಯಕ್ತಿ ಪಂ.ರಾ.ಸಂಸ್ಥೆ ತಾ. ಪಂ. ಕಡಬ, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಹಾಗೂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.