ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿ ರಾಷ್ಟ್ರಸೇವಿಕಾ ಸಮಿತಿ ಬೌದ್ದಿಕ್ ಪ್ರಮುಖ್ ಮೀನಾಕ್ಷಿ ಮಾತನಾಡಿ, ಸಂಘಟನೆಯ ಇತಿಹಾಸ ಮತ್ತು ಸಾಧನೆಗಳನ್ನು ಸ್ಮರಿಸುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಡಾ.ಕೇಶವ ಬಲಿರಾಮ ಹೆಡ್ಗೆವಾರ್ ಅವರ ಸಂಘ ಸ್ಥಾಪನೆಯ ಉದ್ದೇಶ ಮತ್ತು ಮಹತ್ವದ ಕುರಿತು ಉಪನ್ಯಾಸ ನೀಡಿದರು.
ಪ್ರಾಂಶುಪಾಲ ಮುರಳೀಧರ್ ಯಸ್ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕರಾದ ಪ್ರಶಾಂತ್ ವಂದಿಸಿದರು.