ಪುತ್ತೂರು: ಕೋಡಿಂಬಾಡಿಯ ಶಾಂತಿನಗರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ, ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಹಿರಿಯ ಮೊಕ್ತೇಸರ ಯು.ಜಿ.ರಾಧಾ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪೂಜಾ ಸಮಿತಿಯ ಅಧ್ಯಕ್ಷ ಉಮೇಶ್ ಪನಿತೋಟ ಸಹಿತ ಹಲವರು ಭಾಗವಹಿಸಿದ್ದರು.

ಲಿತಿನ್ ಶಾಂತಿನಗರ ಮತ್ತು ಬಳಗದವರು ವಂದೇ ಮಾತರಂ, ಧ್ವಜಗೀತೆ ಮತ್ತು ರಾಷ್ಟ್ರಗೀತೆ ಹಾಡಿದರು. ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಅಳವಡಿಸಲಾಗಿರುವ ‘ಶಾಂತಿನಗರ’ ನಾಮಫಲಕವನ್ನು ಯು.ಜಿ.ರಾಧಾ ಅನಾವರಣಗೊಳಿಸಿದರು.