ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ, ಸದಸ್ಯರುಗಳಾದ ಮೀನಾಕ್ಷಿ ವಿ.ರೈ, ಸುಭಾಷಿಣಿ, ಮಮತಾ ರೈ, ಜಯಂತಿ ಎಸ್.ಭಂಡಾರಿ, ನೆಬಿಸಾ, ಅಬ್ದುಲ್ ಖಾದರ್ ಮೇರ್ಲ, ಜಯಂತ ಪೂಜಾರಿ ಕೆಂಗುಡೇಲು, ತಾರಾನಾಥ ಕಂಪ, ವಿಜಯ ಕುಮಾರ್ ಸಣಂಗಳ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವೇಶ್ವರ ಭಟ್, ಗ್ರಾಪಂ ಸಿಬ್ಬಂದಿಗಳಾದ ಶಿವಪ್ರಸಾದ್, ರಾಕೇಶ್, ಮಾಲತಿ, ಜ್ಯೋತಿ, ಧರ್ಮಣ್ಣ, ಗ್ರಂಥಾಲಯ ಮೇಲ್ವಿಚಾರಕಿ ಅನೂಷಾ ಕೆಯ್ಯೂರು, ಸಂಜೀವಿನಿ ಒಕ್ಕೂಟದ ಎಂಬಿಕೆ ಯಶಸ್ವಿ ಹಾಗೂ ಸದಸ್ಯರುಗಳು, ಅಂಗನವಾಡಿ ಶಿಕ್ಷಕಿಯರು,ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು.