ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್ ಕೆದಂಬಾಡಿಬೀಡುರವರು ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ, ಗ್ರಾಪಂ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಮೆಲ್ವಿನ್ ಮೊಂತೆರೋ, ಸಿಬ್ಬಂದಿಗಳಾದ ಜಯಂತ ಮೇರ್ಲ,ಮೃದುಳಾ, ಗಣೇಶ್, ಶಶಿಪ್ರಭಾ ರೈ, ವಿದ್ಯಾಪ್ರಸಾದ್ ಸೇರಿದಂತೆ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರು, ನವೋದಯ ರಿಕ್ಷಾ ಚಾಲಕ ಮಾಲಕರು, ವರ್ತಕರ ಸಂಘದ ಪದಾಧಿಕಾರಿಗಳು, ತಿಂಗಳಾಡಿ ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರುಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ ವಂದಿಸಿದರು.