ಪೆರಾಬೆ: ಪೆರಾಬೆ ಗ್ರಾಮ ಪಂಚಾಯತ್‌ನಲ್ಲಿ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ., ಧ್ವಜಾರೋಹಣ ನೆರವೇರಿಸಿದರು.
ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸ್ವಚ್ಛ ಮತ್ತು ಸುಜಲ ಗ್ರಾಮ ಸಂಕಲ್ಪ ಪ್ರತಿಜ್ಞಾ ವಿಧಿ ಸ್ಪೀಕರಿಸಲಾಯಿತು. ಗ್ರಾ.ಪಂ.ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಸದಾನಂದ ಕುಂಟ್ಯಾನ, ಪಿ.ಜಿ ರಾಜು, ಸುಶೀಲ, ಮೋಹಿನಿ, ಮಮತ, ಕಾವೇರಿ, ಕುಮಾರ ಬಿ.ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ ಕೆ.ಬಿ., ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ ಕೆ.ಬಿ.ಸ್ವಾಗತಿಸಿ, ವಂದಿಸಿದರು.