ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್ ಅವರು ದ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾ.ಪಂ.ಸದಸ್ಯ ಪ್ರವೀಣ್ ಚಂದ್ರ ರೈ ಕುಮೇರು, ಹಿರಿಯರಾದ ಬಾಳಪ್ಪ ಗೌಡ ಮಾಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಎಸ್ ಡಿ ಎಂ ಸಿ ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶ್ವಿನ್ ಕರಿಮಜಲು, ಶಾಲಾ ನಾಯಕಿ ಛಾಯಾ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ನಡೆಯಿತು. ಕಳೆದ ಶೈಕ್ಷಣಿಕ ಸಾಲಿನ 7ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಕುಮುದಾ ಮತ್ತು ದ್ವಿತೀಯ ಸ್ಥಾನವನ್ನು ಮನ್ವಿತಾರವರಿಗೆ ದತ್ತಿನಿಧಿ ವಿತರಿಸಲಾಯಿತು. ವಿದ್ಯಾರ್ಥಿನಿ ಸಮೃದ್ಧಿ ಪ್ರಾರ್ಥಿಸಿದರು, ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಹಿರಿಯ ಶಿಕ್ಷಕಿ ಗೀತಾ ಕುಮಾರಿ ವಂದಿಸಿದರು. ಶಿಕ್ಷಕ ಜನಾರ್ದನ ಹೇಮಳ ಕಾರ್ಯಕ್ರಮ ನಿರೂಪಿಸಿದರು.