ರಾಮಕುಂಜ: ಕೊಯಿಲ ಗ್ರಾ.ಪಂ.ವತಿಯಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ ಸುಭಾಶ್ ಶೆಟ್ಟಿ ನೆರವೇರಿಸಿದರು. ಭಾರತ ಮಾತೆ, ಡಾ| ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮರಿಗೆ ನುಡಿ ನಮನ ಸಲ್ಲಿಸಲಾಯಿತು. ಪಿಡಿಓ ಸಂದೇಶ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಬಳಿಕ ನಡೆದ ಸಭೆಯಲ್ಲಿ ನವೀಕರಿಸಬಹುದಾದ ಇಂಧನ, ಸ್ವಚ್ಛತೆ ಬಗ್ಗೆ ಮಾಹಿತಿ ನೀಡಲಾಯಿತು. ರಾಷ್ಟ್ರಧ್ವಜದ ಚಿತ್ರ ಬಿಡಿಸುವ ಅಭಿಯಾನ ಆಯೋಜಿಸಲಾಯಿತು.
ಗ್ರಾ.ಪಂ.ಉಪಾಧ್ಯಕ್ಷ ಯತೀಶ್ಕುಮಾರ್, ಕಾರ್ಯದರ್ಶಿ ಪಮ್ಮು, ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು, ಸ್ನೇಹ ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.