ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ, ಪ್ರಾಥಮಿಕ ಆ.ಮಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ ಹಾಗೂ ಸಂತ ಫಿಲೋಮಿನಾ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯಗುರು ವಂ. ಮ್ಯಾಕ್ಸಿಮ್ ಡಿಸೋಜ ರಾಷ್ಟ್ರಧ್ವಜವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಂದೇಶ ನೀಡಿದರು.

ವಿದ್ಯಾರ್ಥಿಗಳಾದ ವೀಣಾ ಮತ್ತು ಮುಹಮ್ಮದ್ ಮುಹಾಜಮ್ ಹಟ್ಟಾ ಸ್ವಾತಂತ್ರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಸಂತ ಫಿಲೋಮಿನ ಅನುದಾನಿತ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಕುಮಾರ್ ರೈ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸಿಸ್ಟರ್ ಲೋರ, ಉಭಯ ಶಾಲೆಗಳ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಇಸ್ಮಾಹಿಲ್ ಬೊಳುವಾರು ಮತ್ತು ಮುಖೇಶ್ ಕೆಮ್ಮಿಂಜೆ, ಶಾಲಾ ವಿದ್ಯಾರ್ಥಿ ನಾಯಕರುಗಳಾದ ಜೀತನ್ ಮತ್ತು ಅಬ್ದುಲ್ ಮನಾಫ್ ಉಪಸ್ಥಿತರಿದ್ದರು. ಎನ್‌ಸಿಸಿ ಭೂದಳ, ನೌಕಾದಳ, ಸ್ಕೌಟ್ಸ್, ಬುಲ್ ಬುಲ್, ಸ್ಕೂಲ್ ಬ್ಯಾಂಡ್ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ವರ್ಗದವರಿಂದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಲಾಯಿತು. ಶಿಕ್ಷಕಿ ಅನ್ವಿತಾ ರೈ ಸ್ವಾಗತಿಸಿ ಶಿಕ್ಷಕಿ ಕಾರ್ಮಿನ್ ಪಾಯ್ಸ್ ವಂದಿಸಿದರು. ಶಿಕ್ಷಕಿ ರೇಷ್ಮಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ಉಭಯ ಶಾಲೆಗಳ ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು. ಸಿಹಿಯನ್ನು ಹಂಚಲಾಯಿತು.

LEAVE A REPLY

Please enter your comment!
Please enter your name here