ಉಪ್ಪಿನಂಗಡಿ: ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀಯವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್.,ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀ, ಉಪಾಧ್ಯಕ್ಷ ದೇವಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ವಿದ್ಯಾ ಕೆ.,ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಚಿತ್ರಾವತಿ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅತಿಥಿ ಶಿಕ್ಷಕಿ ಪವಿತ್ರಾ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಕ್ಷರದಾಸೋಹ ಸಿಬ್ಬಂದಿಗಳಾದ ಗೀತಾ, ಸರೋಜ, ಎಸ್ಡಿಎಂಸಿ ಸದಸ್ಯರು, ಶಾಲಾ ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಸಿಹಿ ತಿಂಡಿ ವಿತರಿಸಲಾಯಿತು.