ಉಪ್ಪಿನಂಗಡಿ: ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಶಾಲಾ ಅಧ್ಯಕ್ಷರಾದ ಯೂಸುಫ್ ಹಾಜಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಮಹತ್ವ ಹಾಗೂ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.
ಪ್ರಾಂಶುಪಾಲರಾದ ಸಂಶಾದ್ ಬೇಗಂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಿಕ್ಷಕಿ ಹರಿಣಿಯವರು ಸ್ವಾಗತಿಸಿ ವಂದಿಸಿದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭ ಮುಕ್ತಾಯಗೊಂಡು, ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.