ಹಿರೇಬಂಡಾಡಿ: ಗ್ರಾಮದ ಅಡ್ಯಾಲು ಅಮೃತ ಸರೋವರದ ಬಳಿ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಅಡ್ಯಾಲು ಅಮೃತ ಸರೋವರದ ಬಳಿ ಮಾಜಿ ಶಾಸಕ ಸಂಜೀವ ಮಟಂದೂರು ಅವರು ಧ್ವಜಾರೋಹಣ ನೆರವೇರಿಸಿದರು.
ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷ ಸದಾನಂದ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷರು, ಗ್ರಾ.ಪಂ ಸದಸ್ಯರು, ಶಾಲಾ ಶಿಕ್ಷಕರು, ನಿವೃತ ಶಿಕ್ಷಕರು, ಗ್ರಾಮಸ್ಥರು, ಶಾಲಾ ಮಕ್ಕಳು, ಗ್ರಾಮಸ್ಥರು ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಭಾರ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸತೀಶ್ ಬಂಗೇರ ಡಿ. ಸ್ವಾಗತಿಸಿ, ವಂದಿಸಿದರು.