ಪುತ್ತೂರು: ಅವಿಭಜಿತ ಪುತ್ತೂರು ಬಿಲ್ಲವ ಸಂಘದಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನೇರೆವರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಜೊತೆ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಗುರು ಮಂದಿರದ ಸಂಚಾಲಕ ಅಶೋಕ್ ಕುಮಾರ್ ಪಡ್ಪು, ಸದಸ್ಯ ಮೋಹನ್ ತೆಂಕಿಲ, ಮಹಿಳಾ ವೇದಿಕೆಯ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ಕಾರ್ಯದರ್ಶಿ ಗೀತಾ ರಮೇಶ್, ಜೊತೆ ಕಾರ್ಯದರ್ಶಿ ಪ್ರೀತಿಕಾ ಹಾಗೂ ಉದಯಕುಮಾರ್ ಕೋಲಾಡಿ, ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ದಾಮೋದರ ಪೂಜಾರಿ ಶಾಂತಿಗೋಡು, ರವಿಚಂದ್ರ ಪಡ್ನೂರು, ಕಚೇರಿ ಮ್ಯಾನೇಜರ್ ಪ್ರಕಾಶ್ ನಾಡಾಜೆ, ಮಮತಾ ಮತ್ತಿತರರು ಉಪಸ್ಥಿತರಿದ್ದರು.