ನೆಲ್ಯಾಡಿ ಬೆಥನಿ ಐಟಿಐಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಸಲಾಂ ಬಿಲಾಲ್ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಬೆಥನಿ ಧರ್ಮ ಸೇವಾ ಸಂಘಂ ಇದರ ಸಂಚಾಲಕರಾದ ರೆ. ಫಾ. ಡಾ| ವರ್ಗೀಸ್ ಕೈಪನಡ್ಕ, ಬೆಥನಿ ಐಟಿಐ ನೆಲ್ಯಾಡಿ ಇದರ ನಿರ್ದೇಶಕರಾದ ರೆ.ಫಾ.ಜೋರ್ಜ್ ಸ್ಯಾಮುವೆಲ್ ಓಐಸಿ, ರೆ. ಫಾ. ಜೈಸನ್ ಸೈಮನ್ ಓಐಸಿ, ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಉಷಾ ಜೋಯಿ, ಬೆಥನಿ ಐಟಿಐ ಪ್ರಾಂಶುಪಾಲ ಸಜಿ ಕೆ. ತೋಮಸ್, ತರಬೇತಿ ಅಧಿಕಾರಿ ಜಾನ್ ಪಿ.ಎಸ್., ನೆಲ್ಯಾಡಿ ಸೀನಿಯರ್ ಛೇಂಬರ್ ಅಧ್ಯಕ್ಷ ಪ್ರಕಾಶ್ ಕೆ.ವೈ., ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ರಾಷ್ಟ್ರಗೀತೆ, ದೇಶಭಕ್ತಿಗೀತೆಗಳು ಮತ್ತು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನದ ಮುಖ್ಯ ಆಕರ್ಷಣೆಯಾಗಿತ್ತು.

LEAVE A REPLY

Please enter your comment!
Please enter your name here