ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲ ದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಅವರು ದ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಸುಲೋಚನಾ ಮಿಯೋಲ್ಪೆ, ತೇಜಕುಮಾರಿ ಉದ್ದಲಡ್ಡ, ಕೀರ್ತಿ ಕುಮಾರಿ ಅಂಬುಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಿತ್ ಮಾಚಿಲ, ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗಣೇಶ್ ಕುಂಬ್ಲಾಡಿ, ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಹಸ್ತ ಪ್ರೊಡಕ್ಟ್ ಮಾಲಕರಾದ ವಿಶ್ವನಾಥ ಅಂಬುಲ, ನೇಮಣ್ಣ ಗೌಡ ಅಂಬುಲ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು. ಮುಖ್ಯಗುರು ಪದ್ಮಯ್ಯ ಗೌಡ ಸ್ವಾಗತಿಸಿ, ಸಹ ಶಿಕ್ಷಕಿ ಮೋಹಿನಿ ವಂದಿಸಿದರು.