ಪುಣಚ ಶ್ರೀದೇವಿ ವಿದ್ಯಾಕೇಂದ್ರದಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ೭೯ನೇ ವರ್ಷದ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.


ನಿವೃತ್ತ ಸೈನಿಕ ನಾಯಬ್ ಸುಬೇದಾರ್ ಶಂಭು ಭಟ್ ಟಿ, ಧ್ವಜಾರೋಹಣ ನೆರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಜಯಶ್ಯಾಂ ನೀರ್ಕಜೆ, ಸಂಚಾಲಕ ರವೀಶ್ ಪೊಸವಳಿಕೆ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಾತಂತ್ರೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.
ಘೋಷ್’ವಾದನ,ಜೈಕಾರದ ಮೂಲಕ ಮೆರವಣಿಗೆ ಪರಿಯಾಲ್ತಡ್ಕಕ್ಕೆ ಸಾಗಿ ಬಂದು ಸಮಾಪನಗೊಂಡಿತು. ಅಲ್ಲಲ್ಲಿ ಸಿಹಿತಿಂಡಿ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here